Nikhil Kumar

Nikhil Kumar Instagram – ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್ ಅವರನ್ನು ಲಖನೌದ ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಲಾಯಿತು.

ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು.

ಶ್ರೀ ಮುಲಾಯಂ ಸಿಂಗ್ ಯಾದವ್ ಜೀ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರ ಕುಟುಂಬಗಳ ನಡುವಿನ ಬಾಂಧವ್ಯದ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ ಶ್ರೀ ಅಖಿಲೇಶ್ ಯಾದವ್ ಅವರು, ಬಹುಮುಖ್ಯವಾಗಿ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರು, ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಶ್ರೀ ಅಖಿಲೇಶ್ ಅವರು ಚರ್ಚೆ ನಡೆಸಿದರು.

ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಶ್ರೀ ಅಖಿಲೇಶ್ ಅವರು ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ. Met Shri Akhilesh Yadavji – Ex Chief Minister of UP and President of Samajwadi Party at his residence in Lucknow today. Had a great conversation about various current political and social issues. Thank you for your hospitality and guidance as a dear brother, Akhilesh ji. @socialist_akhileshyadav | Posted on 15/Jun/2023 17:56:33

Nikhil Kumar
Nikhil Kumar

Check out the latest gallery of Nikhil Kumar